ಬೆಂಗಳೂರು, ಮಾ.12 (DaijiworldNews/PY): "ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವ ಹಿನ್ನೆಲೆ ಮಾರ್ಚ್ 13ಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ತಿಳಿಸಿದೆ.
"ದ.ಕ, ಉಡುಪಿ ಸೇರಿದಂತೆ ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾರ್ಚ್ 13ರ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆಯಾಗುವದ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
"ಮಾ.11ರ ಗುರುವಾರ 8.30ಕ್ಕೆಅಂತ್ಯಗೊಂಡ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕಲಬುರ್ಗಿಯಲ್ಲಿ 38.5ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ದಾಖಲಾದ ಅತೀ ಗರಿಷ್ಠ ತಾಪಮಾನ ಇದಾಗಿದೆ. ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನುಳಿದಂತೆ ರಾಜ್ಯದಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರೆಯಲಿದೆ" ಎಂದು ಹವಾಮಾನ ಇಲಾಖೆ
ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈಯಲ್ಲಿ ಸುಳಿಗಾಳಿಯ ತೀವ್ರೆತೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಕಾರಣ ರಾಜ್ಯದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.