ವಿಜಯನಗರ, ಮಾ.12 (DaijiworldNews/HR): ಹಂಪಿಯ ಕಮಲ ಮಹಲ್ ಸ್ಮಾರಕ ಸುತ್ತಲಿನ ಕೋಟೆ ಗೋಡೆಯ ಒಂದು ಭಾಗ ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದಿದೆ ಎಂದು ತಿಳಿದು ಬಂದಿದೆ.
ಒಂದು ಭಾಗ ಭಾಗಶಃ ಕುಸಿದಿದ್ದು, ಇದು ಪುರಾತನ ಗೋಡೆಯಾಗಿರುವುದರಿಂದ ಕುಸಿದು ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಘಟನೆಯಲ್ಲಿ ಯಾವುದೇ ಸ್ಮಾರಕಕ್ಕೆ ಹಾನಿಯಾಗಿಲ್ಲ ಎನ್ನಲಾಗಿದೆ.
ಇನ್ನು ಈ ಘಟನೆ ನಡೆಯುವಾಗ ಯಾರೊಬ್ಬರೂ ಅಲ್ಲಿ ಇರಲಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಹಂಪಿ ವೃತ್ತದ ಡೆಪ್ಯುಟಿ ಸೂಪರಿಟೆಂಡೆಂಟ್ ಪಿ. ಕಾಳಿಮುತ್ತು ತಿಳಿಸಿದ್ದಾರೆ.
ಈ ಕುರಿತು ಕೇಂದ್ರ ಕಚೇರಿಗೆ ಮಾಹಿತಿ ನೀಡಲಾಗಿದ್ದು, ಈ ಹಿಂದಿನಂತೆ ಮರುನಿರ್ಮಾಣಕ್ಕೆ ಪ್ರಸ್ತಾವ ಕಳಿಸಿ, ಒಪ್ಪಿಗೆ ಪಡೆಯಲಾಗುವುದು ಎಂದು ಕಾಳಿಮುತ್ತು ಹೇಳಿದ್ದಾರೆ.