ಬೆಂಗಳೂರು, ಮಾ.12 (DaijiworldNews/HR): ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಜೆಡಿಎಸ್ಗೆ ಬಿಗ್ ಶಾಕ್ ಎದುರಾಗಿದ್ದು, ನನ್ನ ಜೊತೆಗೆ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬಂಗಾರಪ್ಪ ಅವರ ಬೆಂಬಲಿಗರಾಗಿ ಡಿ.ಕೆ.ಶಿವಕುಮಾರ್ ಕೆಲಸ ಮಾಡಿದ್ದರು. ಡಿಕೆಶಿ ಅಧ್ಯಕ್ಷತೆಯಲ್ಲಿ ನನಗೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು,ಕಾಂಗ್ರೆಸ್ ಸೇರಲು ಶಿವಕುಮಾರ್ ಅಣ್ಣ ನನಗೆ ಮೊದಲಿನಿಂದಲೂ ಹೇಳುತ್ತಿದ್ದರು. ಈ ದೇಶಕ್ಕೆ ಕಾಂಗ್ರೆಸ್ ಅವಶ್ಯಕತೆ ಇದ್ದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ" ಎಂದರು.
ಇನ್ನು "ಗೀತಾ ಶಿವರಾಜ್ ಕುಮಾರ್ ಕೂಡ ಕೆಲವು ದಿನಗಳಲ್ಲಿ ಗೀತಾ ಕಾಂಗ್ರೆಸ್ ಸೇರಲಿದ್ದಾರೆ" ಎಂದು ಹೇಳಿದ್ದಾರೆ.