ಕೋಲ್ಕತ್ತ, ಮಾ.12 (DaijiworldNews/HR): ತೃಣಮೂಲ ಕಾಂಗ್ರೆಸ್ ಪಕ್ಷವು ಈಗ ಖಾಸಗಿ ಕಂಪನಿಯಂತಾಗಿದ್ದು, ಅಲ್ಲಿ ‘ಅತ್ತೆ’ ಮತ್ತು ‘ಅಳಿಯ’ನಿಗೆ ಮಾತ್ರ ಮುಕ್ತವಾಗಿ ಮಾತನಾಡುವ ಸ್ವಾತಂತ್ರ್ಯವಿದೆ ಎಂದು ಬಿಜೆಪಿಯ ನಂದಿಗ್ರಾಮ ಕ್ಷೇತ್ರದ ಅಭ್ಯರ್ಥಿ ಸುವೇಂದು ಅಧಿಕಾರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಪಶ್ಚಿಮ ಬಂಗಾಳದಲ್ಲಿ ಉದ್ಯೋಗಾವಕಾಶಗಳ ಕೊರತೆ ಇದ್ದು, ಬದಲಾವಣೆ ತರುವುದಕ್ಕಾಗಿ ಟಿಎಂಸಿಯನ್ನು ಅಧಿಕಾರದಿಂದ ತೆರವುಗೊಳಿಸಬೇಕಿದೆ" ಎಂದರು.
ಇನ್ನು "ಬಿಜೆಪಿಯು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ತತ್ವದಲ್ಲಿ ನಂಬಿಕೆ ಇರಿಸಿದೆ" ಎಂದಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯಿಂದ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿಯಿಂದ ಸುವೇಂದು ಅಧಿಕಾರಿ ನಂದಿಗ್ರಾಮ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.