ಬೆಂಗಳೂರು, ಮಾ12 (DaijiworldNews/MS): ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೋವಿಡ್ ಲಸಿಕಾ ಅಭಿಯಾನ ಆರಂಭಗೊಂಡಿದೆ. ಮಾ.12 ರ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿನ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನಾ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದು, ಬಳಿಕ ಸಿಎಂ ವಿಶ್ರಾಂತಿ ಪಡೆದಿದ್ದಾರೆ
2ನೇ ಹಂತದ ಲಸಿಕಾ ಅಭಿಯಾನದಲ್ಲಿ 60 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೂ ಲಸಿಕೆ ನೀಡಿಕೆ ಪ್ರಾರಂಭಗೊಂಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸಹಿತ ರಾಜ್ಯದ ಅನೇಕ ಸಚಿವರು ಕೊರೋನಾ ಲಸಿಕೆಯನ್ನು ಪಡೆದಿದ್ದರು. ಆ ಮೂಲಕ ಜನ ಸಾಮಾನ್ಯದಲ್ಲಿನ ಅನಗತ್ಯ ಆತಂಕವನ್ನು ದೂರ ಮಾಡಿದ್ದರು.