ಪುಣೆ, ಮಾ.12 (DaijiworldNews/HR): ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಶಾಲಾ, ಕಾಲೇಜುಗಳನ್ನು ಮತ್ತೆ ಬಂದ್ ಮಾಡುವುದಾಗಿ ಅಧಿಕಾರಿಗಳು ಇಂದು ಘೋಷಿಸಿ, ಕಠಿಣ ನಿರ್ಬಂಧಗಳನ್ನೂ ಜಾರಿಗೊಳಿಸಿರುವುದಾಗಿ ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಮಾರ್ಚ್ 31ರವರೆಗೆ ಪುಣೆಯಲ್ಲಿ ಶಾಲಾ, ಕಾಲೇಜುಗಳು ಬಂದ್ ಆಗಿರಲಿದ್ದು, ರಾತ್ರಿ 11ರಿಂದ ಬೆಳಗ್ಗೆ 6ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ ಕರ್ಫ್ಯೂ ವೇಳೆ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ಸಾರ್ವಜನಿಕ ಚಟುವಟಿಕೆಗೆ ಅವಕಾಶ ಇಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.
ಇನ್ನು ಬಾರ್ ಮತ್ತು ರೆಸ್ಟೋರೆಂಟ್ಸ್ ಗಳು ರಾತ್ರಿ 10 ಗಂಟೆವರೆಗೆ ಮಾತ್ರ ತೆರೆದಿರಲಿದ್ದು, ಮಾರುಕಟ್ಟೆ, ಸಿನಿಮಾ ಹಾಲ್ ಮತ್ತು ಮಾಲ್ಸ್ ಗಳು ರಾತ್ರಿ 10ಗಂಟೆಗೆ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.