ನವದೆಹಲಿ, ಮಾ.13 (DaijiworldNews/HR): ಕೊರೊನಾ ರೋಗದ ಅತ್ಯಂತ ಕಷ್ಟದ ಸಮಯದಲ್ಲಿ ಎಲ್ಲರೂ ಹೆಣಗಾಡುತ್ತಿರುವಾಗ ಉದ್ಯಮಿ ಗೌತಮ್ ಅದಾನಿ ಸಂಪತ್ತನ್ನು ಹೇಗೆ ನಿರೀಕ್ಷೆಗೂ ಮೀರಿ ಹೆಚ್ಚಿಸಿಕೊಂಡಿದ್ದಾರೆ" ಎಂದು ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಕುರಿತು ವರದಿಯೊಂದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, " 2020ರಲ್ಲಿ ನಿಮ್ಮ ಸಂಪತ್ತು ಎಷ್ಟು ಹೆಚ್ಚಾಗಿದೆ? ಶೂನ್ಯ. ನೀವು ಬದುಕಲು ಹೆಣಗಾಡುತ್ತೀರಿ. ಆದರೆ ಗೌತಮ್ ಅದಾನಿ 12 ಲಕ್ಷ ಕೋಟಿ ರೂ. ಗಳಿಕೆ ಪಡೆದು ತಮ್ಮ ಸಂಪತನ್ನು ಶೇಕಡಾ 50 ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಇದು ಏಕೆ ಎಂದು ಹೇಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ವರದಿಗಳ ಪ್ರಕಾರ, ಸಂಪತ್ತು ಗಳಿಕೆಯಲ್ಲಿ ವಿಶ್ವದಲ್ಲೇ ಅದಾನಿ ಮುಂಚೂಣಿಯಲ್ಲಿ ಗುರುತಿಸಿದ್ದು, ಈ ಪಟ್ಟಿಯಲ್ಲಿ ಅಮೆಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಹಾಗೂ ಟೆಸ್ಲಾ ಸಿಇಒ ಎಲನ್ ಮಸ್ಕ್ ಅವರನ್ನೇ ಹಿಂದಿಕ್ಕಿದ್ದಾರೆ ಎನ್ನಲಾಗಿದೆ.