ಆಂಧ್ರಪ್ರದೇಶ, ಮಾ.14 (DaijiworldNews/PY): ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನೂಜಿವೀಡು ಮಂಡಲಂ ಗೊಲ್ಲಪಲ್ಲಿಯಲ್ಲಿ ಆಟೋ ರಿಕ್ಷಾಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಮಿಕರು ಗೊಲ್ಲಪಲ್ಲಿಯ ಬಳಿಯ ತಾಂಡವೊಂದರ ನಿವಾಸಿಗಳಾಗಿದ್ದು, ಆಟೋ ರಿಕ್ಷಾದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಲಾರಿ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು ಏಳು ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.