ಜಮ್ಮು-ಕಾಶ್ಮೀರ, ಮಾ.14 (DaijiworldNews/MB) : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ರವಿವಾರ ನಸುಕಿನಲ್ಲಿ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ.
ಶೋಪಿಯಾನ್ ಜಿಲ್ಲೆಯ ರಾವಲ್ಪೊರ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ.
ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದು ಪ್ರಸ್ತುತ ಭದ್ರತಾ ಪಡೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದಿದೆ.