ಗದಗ, ಮಾ. 14 (DaijiworldNews/HR): ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ವೀರಪ್ಪ ಎನ್ನುವ ವೃದ್ಧರೊಬ್ಬರು ಡಂಗುರ ಬಾರಿಸುವ ಮೂಲಕ ಕೊರೊನಾ ಲಸಿಕೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, "ಗದಗ ಜಿಲ್ಲೆಯ ಜಕ್ಕಲಿ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ" ಎಂದು ಹೇಳಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಟ್ವೀಟ್ನಲ್ಲಿ ಟ್ಯಾಗ್ ಮಾಡಿದ್ದ ಸುಧಾಕರ್, "ಕೊರೊನಾ ವ್ಯಾಕ್ಸಿನ್ ಅಭಿಯಾನ ಜನಾಂದೋಲನವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಗ್ರಾಮೀಣ ಪ್ರದೇಶದಲ್ಲಿ ಸಂಪ್ರದಾಯಿಕ ವಿಧಾನದ ಮೂಲಕ ಲಸಿಕೆ ಬಗ್ಗೆ ಅರಿವು ಮೂಡಿಸುತ್ತಿರುವುದು ಸ್ಪೂರ್ತಿದಾಯಕವಾಗಿದೆ" ಎಂದು ತಿಳಿಸಿದ್ದಾರೆ.