ಬೆಂಗಳೂರು, ಮಾ.14 (DaijiworldNews/PY): "ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದ ಬಗ್ಗೆ ಅಸೆಂಬ್ಲಿ ಮಾತನಾಡುತ್ತದೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿ.ಡಿ ಪ್ರಕರಣ ಹಿಂದೆ ಕೈ ನಾಯಕರಿದ್ದಾರೆ ಎನ್ನುವ ಆರೋಪದ ಬಗ್ಗೆ ಕೂಡಾ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ತಪ್ಪು ಯಾರ ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ" ಎಂದಿದ್ದಾರೆ.
ಯುವತಿ ಶನಿವಾರ ವಿಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋದಲ್ಲಿ, ರಮೇಶ್ ಜಾರಕಿಹೊಳಿ ಅವರು ಕೆಲಸ ಕೊಡಿಸುವುದಾಗಿ ನಂಬಿಸಿ ಅನ್ಯಾಯ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ಅವರೇ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ತನಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾಳೆ.