ಬೆಂಗಳೂರು, ಮಾ.14 (DaijiworldNews/PY): "ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು ಈ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಯಾವುದೇ ರೀತಿಯಾದ ಚರ್ಚೆ ನಡೆದಿಲ್ಲ" ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆದರೆ, ನೈಟ್ ಕರ್ಫ್ಯೂ ಜಾರಿ ವಿಚಾರವಾಗಿ ಚರ್ಚೆ ನಡೆದಿಲ್ಲ" ಎಂದರು.
ಸದನದಲ್ಲಿ ಸಿ.ಡಿ ವಿಚಾರವನ್ನು ಪ್ರಸ್ತಾಪ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಸಿ.ಡಿ ವಿಚಾರವಾಗಿ ಸಿದ್ದರಾಮಯ್ಯ ಏನೂ ಬೇಕಾದರೂ ಹೇಳಲಿ" ಎಂದು ಹೇಳಿದರು.
"ಸಿ.ಡಿಯಲ್ಲಿ ಕಾಣಿಸಿಕೊಂಡ ಯುವತಿ ಸೇರಿದಂತೆ ಅವರ ಕುಟುಂಬಕ್ಕೆ ಭದ್ರತೆ ನೀಡಿಲು ತಿಳಿಸಿದ್ದೇನೆ. ಎಸ್ಐ ಟಿಯು ತನಿಖೆ ವಿಚಾರವನ್ನು ನೋಡಿಕೊಳ್ಳುತ್ತದೆ" ಎಂದು ತಿಳಿಸಿದರು.