ಕೋಲ್ಕತ್ತ, ಮಾ.14 (DaijiworldNews/MB) : ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಮೂರನೇ ಬಾರಿಗೆ ತನ್ನ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಿದ್ದು ಕಾರಣವನ್ನು ಇನ್ನೂ ತಿಳಿಸಿಲ್ಲ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಂಬಂಧಿತ ಪಕ್ಷದ ಪ್ರಣಾಳಿಕೆಯನ್ನು ಈ ಹಿಂದೆ ಮಾರ್ಚ್ 9 ರಂದು ಬಿಡುಗಡೆ ಮಾಡುವುದಾಗಿ ಟಿಎಂಸಿ ಹೇಳಿತ್ತು. ಆ ಬಳಿಕ ಮಾರ್ಚ್ 11ಕ್ಕೆ ಈ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಆದರೆ ಕೋಲ್ಕತ್ತದಲ್ಲಿ ಅಂದು ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಮಾರ್ಚ್ 14 ರ ರವಿವಾರ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಳಿಘಾಟ್ನಲ್ಲಿರುವ ತಮ್ಮ ನಿವಾಸದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.
ಈಗ ಮತ್ತೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕ ತಿಳಿದು ಬಂದಿಲ್ಲ. ಹಾಗೆಯೇ ಕಾರ್ಯಕ್ರಮ ಮುಂದೂಡಿಕೆಗೆ ಟಿಎಂಸಿ ಕಾರಣವನ್ನೂ ನೀಡಿಲ್ಲ.
ಮಾರ್ಚ್ 27 ರಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಾರಂಭವಾಗಲಿದ್ದು 8 ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.