ನವದೆಹಲಿ, ಮಾ. 14 (DaijiworldNews/HR): ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದ್ದು, ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ ಎನ್ನಲಾಗಿದೆ.
ಇನ್ನು ಕಾರೈಕುಡಿ ಕ್ಷೇತ್ರದಲ್ಲಿ ಹೆಚ್. ರಾಜಾ, ಧರ್ಮಪುರಂ ಕ್ಷೇತ್ರದಲ್ಲಿ ಪಕ್ಷದ ನಾಯಕ ಮುರುಗನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.