ತಿರುವನಂತಪುರ, ಮಾ.14 (DaijiworldNews/PY): ಬಿಜೆಪಿ ರವಿವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, 140 ಕ್ಷೇತ್ರಗಳ ಪೈಕಿ 115 ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾರೆ.
ಮಂಜೇಶ್ವರ ಹಾಗೂ ಕೊನ್ನಿ ಕ್ಷೇತ್ರದಿಂದ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಸ್ಪರ್ಧಿಸಲಿದ್ದು, ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಮೆಟ್ರೋ ಮ್ಯಾನ್ ಖ್ಯಾತಿಯ ಇ ಶ್ರೀಧರನ್ ಅವರು ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕುಮ್ಮನಂ ರಾಜಶೇಖರನ್ ಅವರು ನೆಮೊಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಪಿ ಕೆ ಕೃಷ್ಣದಾಸ್ ಅವರು ಕಟ್ಟಕ್ಕಡದಿಂದ ಹಾಗೂ ಸಿ.ಕೆ ಪದ್ಮನಾಭ್ ಅವರು ಧರ್ಮದೋಮ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಎಪ್ರಿಲ್ 6ರಂದು ಕೇರಳ ವಿಧಾನಸಭೆಯ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.