ಕೋಲ್ಕತಾ, ಮಾ. 14 (DaijiworldNews/SM): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ನಿರ್ದೇಶಕ, ಪೊಲೀಸ್ ವರಿಷ್ಠಾಧಿಕಾರಿಯವರನ್ನು ಅಮಾನತುಗೊಳಿಸಲಾಗಿದೆ.
ಭದ್ರತಾ ನಿರ್ದೇಶಕ ವಿವೇಕ್ ಸಹಯ್ ಮತ್ತು ಪುರ್ಬಾ ಮೆದಿನಿಪುರದ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಪ್ರಕಾಶ್ ಅವರನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಲ್ಲದೆ, ಜಿಲ್ಲಾಧಿಕಾರಿ ವಿಭು ಗೋಯೆಲ್ ಅವರನ್ನು ಹುದ್ದೆಯಿಂದ ತೆರವುಗೊಳಿಸಲಾಗಿದ್ದು, ಚುನಾವಣೇತರ ಹುದ್ದೆಗೆ ವರ್ಗಾಯಿಸಲಾಗಿದೆ ಎಂದು ಆಯೋಗ ತಿಳಿಸಿದೆ.
ಮಾರ್ಚ್ 10ರಂದು ಈ ಘಟನೆ ನಡೆದಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸಲ್ಲಿಸಿದ್ದ ವರದಿ ಹಾಗೂ ವಿಶೇಷ ವೀಕ್ಷಕ ಸಲ್ಲಿಸಿದ್ದ ವರದಿ ಆಧರಿಸಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.