ನವದೆಹಲಿ, ಮಾ.15 (DaijiworldNews/PY): 2.5 ಕೋಟಿ. ರೂ.ಗಳ ಆಸ್ತಿ ಹಣ ಗಳಿಸುವ ಭಾಗವಾಗಿ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಉಳಿದಿರುವ ತನ್ನ ಸಂಪೂರ್ಣ ಪಾಲನ್ನು ಕೇಂದ್ರ ಸರ್ಕಾರ ಮಾರಾಟ ಮಾಡುವ ಉದ್ದೇಶ ಹೊಂದಿದೆ.
ದೆಹಲಿ, ಮುಂಬೈ, ಬೆಂಗಳೂರು ಹಾಗೂ ಹೈದರಾಬಾದ್ ಈ ನಾಲ್ಕು ವಿಮಾನ ನಿಲ್ದಾಣಗಳಲ್ಲಿ ಉಳಿದಿರುವ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಹಾಗೂ ಇದರೊಂದಿಗೆ ಮುಂದಿನ ಆರ್ಥಿಕ ವರ್ಷದೊಳಗೆ ದೇಶದ ಒಟ್ಟು 13 ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡುವ ಯೋಜನೆ ರೂಪಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
"ದೆಹಲಿ, ಮುಂಬೈ, ಬೆಂಗಳೂರು ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ನಡೆಸುತ್ತಿರುವ ಖಾಸಗಿ ಕಂಪೆನಿಗಳು, ಎಎಐನ ಷೇರುಗಳನ್ನು ಕಂಪೆನಿಗಳಿಗೆ ಮಾರಾಟ ಮಾಡಲು ಸರ್ಕಾರ ತೀರ್ಮಾನಿಸಿದೆ" ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
"ಮುಂದಿನ ಆರ್ಥಿಕ ವರ್ಷ ಮುಗಿಯುವುದರ ಒಳಗಾಗಿ 13 ಎಎಐ ವಿಮಾನ ನಿಲ್ದಾಣಗಳನ್ನು ಖಾಸಗೀಕರಣ ಮಾಡಲು ತೀರ್ಮಾನಿಸಿದ್ದು, ಅಧಿಕ ಪ್ರಾಕೇಜ್ಗಳನ್ನು ರಚನೆ ಮಾಡಿ ಲಾಭದಾಯಕ ಹಾಗೂ ಲಾಭರಹಿತ ವಿಮಾನ ನಿಲ್ದಾಣಗಳನ್ನು ಒಗ್ಗೂಡಿಸುವ ಸಾಧ್ಯತೆಗಳನ್ನು ನೋಡಲಾಗುತ್ತಿದೆ" ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಖಾಸಗೀಕರಣದ ಮೊದಲ ಹಂತದಲ್ಲಿ ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು, ತಿರುವನಂತಪುರ ಹಾಗೂ ಗುವಾಹಟಿ ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ಗೆ ಹಸ್ತಾಂತರಿಸಿದ್ದು, ತಿರುವನಂತಪುರ, ಗುವಾಹಟಿಯ ವಿಮಾನ ನಿಲ್ದಾಣಗಳನ್ನು ಸರ್ಕಾರದ ಜೊತೆ ಅದಾನಿ ಕಂಪೆನಿ ಒಪ್ಪಂದ ಮಾಡಿಕೊಂಡಿದೆ.