ಕೃಷ್ಣಗಂಜ್, ಮಾ. 15 (DaijiworldNews/HR): ಸೋಮವಾರ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಡು, ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಬಿಹಾರದ ಕೃಷ್ಣಗಂಜ್ನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.
ಸಾಂಧರ್ಭಿಕ ಚಿತ್ರ
ಈ ಘಟನೆ ಸೋಮವಾರ ಮುಂಜಾನೆ ಸುಮಾರು 3 ಗಂಟೆಗೆ ಸಲಾಂ ಕಾಲೋನಿಯಲ್ಲಿ ನಡೆದಿದ್ದು, ನೂರ್ ಆಲಂ ತನ್ನ ಮಕ್ಕಳೊಂದಿಗೆ ಮನೆಯಲ್ಲಿ ಮಲಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಅವಘಡದಲ್ಲಿ ನೂರು ಆಲಂ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳು ಮತ್ತು ಇಬ್ಬರು ಗಂಡು ಮಕ್ಕಳು ಸಾವಿಗೀಡಾಗಿದ್ದು, ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದರುಎಂದು ಉಪವಿಭಾಗದ ಮ್ಯಾಜಿಸ್ಟ್ರೇಟ್ ಶಹನವಾಜ್ ಅಹ್ಮದ್ ನಿಯಾಜಿ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ತನಿಖೆ ಆರಂಭಿಸಿದ್ದು, ಸಂಪೂರ್ಣ ತನಿಖೆ ಪೂರ್ಣಗೊಂಡ ಬಳಿಕ ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ತಿಳಿಯಲಿದೆ. ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅನ್ವರ್ ಜಾವೇದ್ ಅನ್ಸಾರಿ ಹೇಳಿದ್ದಾರೆ.