ಲಖನೌ, ಮಾ. 15 (DaijiworldNews/HR) : ಬಹುಜನ ಸಮಾಜ ಪಕ್ಷ (ಬಿಎಸ್ಪಿ)ವು ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವಿಧಾನಸಭೆ ಚುನಾವಣೆ ನಡೆಯುವ ಈ ನಾಲ್ಕು ರಾಜ್ಯಗಳಲ್ಲಿ ಬಿಎಸ್ಪಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದು, ಇತರೆ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ದಲಿತರು, ಶೋಷಿತರು, ಬುಡಕಟ್ಟು ಜನರು, ಹಿಂದುಳಿದ ವರ್ಗ, ಮುಸ್ಲಿಮರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಅಭಿವೃದ್ದಿಗಾಗಿ ನಮ್ಮ ಪಕ್ಷ ಶ್ರಮಿಸಲಿದೆ" ಎಂದರು.
ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳ ಪಕ್ಷದ ನಾಯಕರು ತಮ್ಮ ಸ್ವಂತ ಶಕ್ತಿಯಿಂದ ಚುನಾವಣೆ ಎದುರಿಸಿ, ಸಕಾರಾತ್ಮಕ ಫಲಿತಾಂಶ ನೀಡಬೇಕು ಎಂದು ಮನವಿ ಮಾಡಿದರು.