ಮೈಸೂರು, ಮಾ.16 (DaijiworldNews/HR): ಅಪ್ರಾಪ್ತ ಬಾಲಕಿಯ ಮೇಲೆ 2016ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಅಪರಾಧಿಗಳನ್ನು ನದೀಮ್ ಪಾಷಾ, ತನ್ವೀರ್ ಪಾಷಾ, ಸದ್ದಾಂ ಹುಸೇನ್ ಎಂದು ಗುರುತಿಸಲಾಗಿದೆ.
ಇನ್ನು ಈ ಘಟನೆ ನಡೆದ 5 ವರ್ಷದ ಬಳಿಕ ಅಪರಾಧಿಗಳಿಗೆ ಜೈಲುಶಿಕ್ಷೆ ವಿಧಿಸಲಾಗಿದ್ದು, ತಲಾ 50,000 ರೂಪಾಯಿ ದಂಡ ವಿಧಿಸಲಾಗಿದೆ ಎನ್ನಲಾಗಿದೆ.
ಈ ಪ್ರಕರಣ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಹಾಗೂ ಕೊಲೆ ಬೆದರಿಕೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.