ಪುಣೆ, ಮಾ.16 (DaijiworldNews/HR): ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 25 ಕ್ಕೂ ಅಧಿಕ ಅಂಗಡಿಗಳು ನಾಶವಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
,ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಆದರೆ 25 ಅಂಗಡಿಗಳು ಸುಟ್ಟು ಹೋಗಿದ್ದು, ನಮಗೆ ಈ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಒಂಬತ್ತು ನೀರಿನ ಟ್ಯಾಂಕರ್ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆವು. ಅಗ್ನಿ ಶಾಮಕ ದಳ ಸಿಬ್ಬಂದಿಯು ಅರ್ಧ ಗಂಟೆಗೊಳಗೆ ಬೆಂಕಿ ನಂದಿಸಲಾಯಿತು" ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್ ರಾನ್ಪೈಸ್ ಮಾಹಿತಿ ನೀಡಿದ್ದಾರೆ.
ಇನ್ನು ಈ ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ" ಎಂದು ಅವರು ತಿಳಿಸಿದ್ದಾರೆ.