ನವದೆಹಲಿ, ಮಾ.16 (DaijiworldNews/HR): "ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ತಮಗಾಗಿರುವ ಕಾಲಿನ ಗಾಯಕ್ಕೆ ಬಿಜೆಪಿ ಕಾರಣ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಮತಾ ಬಿಟ್ಟರೆ, ಈ ರೀತಿ ಯಾರೂ ಆರೋಪಗಳನ್ನು ಮಾಡಿಲ್ಲ. ತನಿಖಾ ಸಂಸ್ಥೆಗಳು ಮತ್ತು ಪ್ರತ್ಯಕ್ಷದರ್ಶಿಗಳೇ ಭದ್ರತಾ ಕೊರತೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಹೇಳುತ್ತಿದ್ದರೆ. ಆದರೆ ದೀದಿ ಮಾತ್ರ ಹತಾಶೆಯಲ್ಲಿ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಮಮತಾ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು" ಎಂದರು.
ಇನ್ನು "ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ ಎಂದ ಅವರು, ಬಹುಮತದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ" ಎಂದು ಹೇಳಿದ್ದಾರೆ.