ನವದೆಹಲಿ, ಮಾ.17 (DaijiworldNews/MB) : ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ವರ್ಗದ ಹುದ್ದೆಗಳು ಖಾಲಿ ಇದ್ದರೂ, ಪದವಿ ಪಡೆದ ನಿರುದ್ಯೋಗಿ ಯುವ ಸಮೂಹಕ್ಕೆ ಕೇಂದ್ರ ಸರ್ಕಾರ ಉದ್ಯೋಗ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಐಐಎಂನಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ವರ್ಗದವರಿಗೆ ಮೀಸಲಿಟ್ಟಿರುವ ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮದ ವರದಿಗಳನ್ನು ಉಲ್ಲೇಖ ಮಾಡಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
''ವಿದ್ಯಾವಂತ ಯುವಕರು ತೀವ್ರ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ಒಬಿಸಿ-ಎಸ್ಸಿ-ಎಸ್ಟಿ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಮಾಡಿದ್ದಕ್ಕೆ ಸರ್ಕಾರ ಅವರಿಗೆ ದಂಡ ವಿಧಿಸುತ್ತಿದೆ ಎಂದು ತೋರುತ್ತದೆ'' ಎಂದು ರಾಹುಲ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.