ನವದೆಹಲಿ, ಮಾ.17 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯದ ಸಿಎಂಗಳ ಸಭೆ ಕರೆದಿದ್ದು, ಸಭೆ ಪ್ರಾರಂಭವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮುಖೇನ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಸಿಎಂಗಳೊಂದಿಗೆ ಸಭೆ ನಡೆಸುತ್ತಿದ್ದು, ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣದ ಬಗ್ಗೆ ಮಹತ್ವವಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಎಲ್ಲಾ ರಾಜ್ಯಗಳಲ್ಲಿ ಕೊರೊನಾ ಸೋಂಕು ಅಧಿಕವಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕೆ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಬಳಿಕ ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.