ಬೆಂಗಳೂರು, ಮಾ.17 (DaijiworldNews/PY): "ಮುಂದಿನ ದಿನಗಳಲ್ಲಿ ಮಲಹೊರುವ ಪದ್ದತಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.
ವಿಧಾನಪರಿಷತ್ತಿನ ಪ್ರಶ್ನೋತ್ತರ ವೇಳೆ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, "ರಾಜ್ಯದಲ್ಲಿ ಮಲಹೊರುವ ಪದ್ದತಿ ನಿಷೇಧವಿದ್ದರೂ ಕೂಡಾ ಕೆಲ ಕಡೆಗಳಲ್ಲಿ ಈ ರೀತಿಯಾದ ಘಟನೆಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಲಹೊರುವ ಪದ್ದತಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದರು.
"ಕಡ್ಡಾಯವಾಗಿ ಆಧುನಿಕ ಯಂತ್ರಗಳನ್ನು ಬಳಸಿ ಸ್ವಚ್ಛಗೊಳಿಸುವ ನಿಯವಿದ್ದರೂ ಕೂಡಾ ಕೆಲವು ಕಡೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ. ಈ ಪದ್ದತಿಗೆ ಕಡಿವಾಣ ಹಾಕುವುದರ ಜೊತೆಗೆ ಪೌರ ಕಾರ್ಮಿಕರಿಗೆ ಅತ್ಯಾಧುನಿಕ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಅವಶ್ಯಕವಾದ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.