ಬೆಂಗಳೂರು, ಮಾ.18 (DaijiworldNews/PY): ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸಿಬಿಐ ವಿಶೇಷ ನ್ಯಾಯಾಲಯ ಸೇರಿದಂತೆ ಎಲ್ಲಾ ಹೈಕೋರ್ಟ್ನಲ್ಲೂ ವಿನಯ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಆದರೆ, ಎಲ್ಲಾ ಅರ್ಜಿಯನ್ನು ವಜಾಗೊಳಿಸಲಾಗಿದೆ. ಈ ಹಿನ್ನೆಲೆ ವಿನಯ್ ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು.
ನ್ಯಾಯಾಲಯವು ಅರ್ಜಿಯ ಸಂಬಂಧ ಪ್ರತಿವಾದವನ್ನು ಆಲಿಸಿದ್ದು, ಬಳಿಕ ಜಾಮೀನು ಅರ್ಜಿ ವಜಾ ಮಾಡಿ ತೀರ್ಪು ನೀಡಿದೆ.