ಪಶ್ಚಿಮ ಬಂಗಾಳ, ಮಾ.18 (DaijiworldNews/PY): ಪಶ್ಚಿಮ ಬಂಗಾಳದ ಜಗತ್ದಲ್ನಲ್ಲಿ 15 ಸ್ಥಳಗಳಲ್ಲಿ ನಡೆದ ಕಚ್ಚಾ ಬಾಂಬ್ ದಾಳಿಯಲ್ಲಿ ಒಂದು ಮಗು ಸೇರಿದಂತೆ ಮೂರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಗತ್ದಲ್ನ ಗಲಿ ಸಂಖ್ಯೆ 17ರಲ್ಲಿ ಈ ಘಟನೆ ನಡೆದಿದ್ದು, ಬಾರಕ್ಪುರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ನಿವಾಸದ ಸಮೀಪದಲ್ಲೇ ಈ ಘಟನೆ ನಡೆದಿದೆ.
ಸುಮಾರು 15 ಕಡೆಗಳಲ್ಲಿ ಈ ಕಚ್ಚಾ ಬಾಂಬ್ಗಳನ್ನು ಎಸೆಯಲಾಗಿವೆ ಎಂದು ವರದಿಗಳು ತಿಳಿಸಿವೆ. ಅಲ್ಲದೇ, ಕೆಲವು ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿಗೆ ಹಾನಿ ಮಾಡಲಾಗಿದೆ.
ಸ್ಥಳಕ್ಕೆ ಆಗಮಿಸಿದ ಜಗತ್ದಲ್ ಪೊಲೀಸರು, ಸ್ಥಳೀಯರ ಪ್ರತಿಭಟನೆಯನ್ನು ಎದುರಿಸಿದ್ದಾರೆ. ಈ ವೇಳೆ ಪೊಲೀಸರ ಎದುರೇ ಒಂದು ಬಾಂಬ್ ಎಸೆಯಲಾಗಿದೆ ಎಂದು ವರದಿ ಹೇಳಿದೆ.
ಬಾಂಬ್ ದಾಳಿ ನಡೆಸಿದವರು ಯಾರು, ಈ ದಾಳಿಯ ಹಿಂದಿನ ಉದ್ದೇಶ ಏನು ಎನ್ನುವ ಬಗ್ಗೆ ಮಾಹಿತಿ ದೊರೆತಿಲ್ಲ.