ನವದೆಹಲಿ, ಮಾ.18 (DaijiworldNews/PY): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು, ಭಾರತದಲ್ಲಿ ಗುರುವಾರ 35,871 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಸಾಂದರ್ಭಿಕ ಚಿತ್ರ
ಕೊರೊನಾ ಸೋಂಕಿಗೆ ಒಂದೇ ದಿನ 172 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,59,216ಕ್ಕೆ ಏರಿದೆ.
"ದೇಶದಲ್ಲಿ ಒಂದೇ ದಿನ 10,63,379 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 23,03,13,163 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ" ಎಂದು ಐಸಿಎಂಆರ್ ತಿಳಿಸಿದೆ.
ಈ ನಡುವೆ ಬುಧವಾರ 17,741 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1,10,63,025 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ದೇಶದಲ್ಲಿ ಒಟ್ಟು 2,52,364 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
"ದೇಶದಲ್ಲಿ ಜ.16ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಚಾಲನೆ ನೀಡಿದ್ದರು. ಈವರೆಗೆ ಒಟ್ಟು 3,71,43,255 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ" ಎಂದು ಕೇಂದ್ರ ಸರ್ಕಾರ ತಿಳಿಸಿದೆ.