ಬೆಳಗಾವಿ,ಮಾ.18 (DaijiworldNews/HR): "ಬೆಳಗಾವಿ ಲೋಕಸಭೆ ಉಪಾಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಹೈಕಮಾಂಡ್ ಸೂಚಿಸಿದರೆ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, "ಬೆಳಗಾವಿ ಲೋಕಸಭೆ ಚುನಾವಣೆಗೆ ಹೈಕಮಾಂಡ್ ಹೇಳಿದರೆ ಸ್ಪರ್ಧಿಸುತ್ತೇನೆ, ಅಭ್ಯರ್ಥಿ ಸಂಬಂಧ ಈಗಾಗಲೇ ಮೂರ್ನಾಲ್ಕು ಜನರ ಹೆಸರು ಚಾಲ್ತಿಯಲ್ಲಿದ್ದು, ಇದರಲ್ಲಿ ನಾನು ಒಬ್ಬನಾಗಿದ್ದು ಎರಡು ಮೂರು ದಿನಗಳಲ್ಲಿ ಎಲ್ಲಾ ತಿಳಿಯಲಿದೆ" ಎಂದರು.
ಇನ್ನು ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ.2 ರಂದು ಫಲಿತಾಂಶ ಹೊರಬೀಳಲಿದೆ ಎನ್ನಲಾಗಿದೆ.