ಹಾವೇರಿ, ಮಾ.19 (DaijiworldNews/HR): ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಕುರಿತು ದೂರು ದಾಖಲಾಗಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ವಿದ್ಯಾರ್ಥಿನಿಯು ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕ 2019 ರಿಂದ ನೀನು ನನಗೆ ಇಷ್ಟ, ನನಗೆ ಸಹಕರಿಸಿದರೆ ನನ್ನ ವಿಷಯದ ಪರೀಕ್ಷೆಯಲ್ಲಿ ಪಾಸ್ ಮಾಡುತ್ತೇನೆ. ಇಲ್ಲದಿದ್ದರೆ ಫೇಲ್ ಮಾಡುತ್ತೇನೆ ಎಂದು ಬೆದರಿಸಿ ಚೇಂಬರ್ನಲ್ಲಿಯೇ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಕಾಲೇಜಿನ ಚೇಂಬರ್ನಲ್ಲಿ ಬೆದರಿಸಿ ಅತ್ಯಾಚಾರ ಎಸಗಿದ್ದಲ್ಲದೇ, ಲಾಕ್ಡೌನ್ ಸಂದರ್ಭದಲ್ಲಿ ಹಾವೇರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.