ಚೆನ್ನೈ, ಮಾ.19 (DaijiworldNews/PY): ಅರವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೆ.ಅಣ್ಣಾಮಲೈ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಅಣ್ಣಾಮಲೈ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಕಳೆದ 53 ವರ್ಷಗಳಿಂದಲೂ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿಗಲೇ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಈ ಬಾರಿ ಅರವಕುರಿಚಿ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿಟ್ಟಿನಲ್ಲಿ ಅಣ್ಣಾಮಲೈ ಅವರಿಗೆ ಟಿಕೆಟ್ ನೀಡಿದೆ.
ಕರೂರು ಜಿಲ್ಲೆಯ ಅರವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ 2,13,110 ಮತದಾರರಿದ್ದು, 1,01,902 ಪುರುಷ ಮತ್ತು 1,11,201 ಮಹಿಳಾ ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ 45,000ಕ್ಕೂ ಅಧಿಕ ಮುಸ್ಲಿಂ ಮತದಾರರಿದ್ದು, ಪಕ್ಷದ ಅಭ್ಯರ್ಥಿಯಾಗಿ ಅಣ್ಣಾಮಲೈ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
ತಮಿಳುನಾಡಿನಲ್ಲಿ ಎಪ್ರಿಲ್ 6ರಂದು ಒಂದೇ ಹಂತದ ಮತದಾನ ನಡೆಯಲಿದ್ದಿ, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.