ಬೆಂಗಳೂರು, ಮಾ 21(DaijiworldNews/MS): ರಾಜ್ಯದಲ್ಲಿ ಕೋವಿಡ್ ಸೋಂಕು ಉಲ್ಬಣಿಸುತ್ತಿರುವುದು ಕಳವಳಕಾರಿಯಾಗಿದ್ದು, ಈ ಹಿನ್ನಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಲ್ಲಿ, ಆರೋಗ್ಯ ತಜ್ಞರು ಜಿಮ್, ಈಜುಕೊಳ, ಶಾಲೆ ,ಕಾಲೇಜು ಸ್ಥಗಿತಗೊಳಿಸುವುದು ಸೂಕ್ತ ಎಂದು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಶುಕ್ರವಾರ ತಡರಾತ್ರಿ ಕೋವಿಡ್ ನಿಯಂತ್ರಣ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು, ಸೋಂಕು ಪ್ರಕರಣ ಏರುಗತಿಯಲ್ಲಿ ಸಾಗುತ್ತಿರುವುದರಿಂದ ತರಗತಿ ,ಜಿಮ್, ಮುಂತಾದವುಗಳನ್ನು ಮುಚ್ಚುವುದು ಸೂಕ್ತ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಅವ ರಿಗೆ ಶಿಫಾರಸು ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಸಂಬಂಧಿಸಿದ ಇಲಾಖೆಗಳ ಸಚಿವರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ. ಸಭೆಯ ಬಳಿಕ ನೀಡುವ ಶಿಫಾರಸನ್ನು ಸರಕಾರವು ಒಂದೆರಡು ದಿನಗಳಲ್ಲಿ ಜಾರಿಗೊಳಿಸುತ್ತದೆ. ಶುಕ್ರವಾರ ರಾತ್ರಿ ಸಭೆ ನಡೆದಿದ್ದು, ಶಿಫಾರಸು ಜಾರಿ ಸಾಧ್ಯತೆಗಳನ್ನು ಅವಲೋಕಿಸಿ, ಸುತ್ತೋಲೆ ಹೊರಡಿಸಲಾಗುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ
ಕರ್ನಾಟಕ ಮಾತರವಲ್ಲದೆ ಮಹಾರಾಷ್ಟ್ರ, ಪಂಜಾಬ್, , ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗುತ್ತಿದ್ದು ಇದು ಆತಂಕಕ್ಕೆ ಕಾರಣವಾಗಿದೆ.