ನವದೆಹಲಿ, ಮಾ.21 (DaijiworldNews/PY): ಕೊರೊನಾ ಸೋಂಕು ತಗುಲಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ಮೋದಿ ಅವರು ಶೀಘ್ರವೇ ಕೊರೊನಾದಿಂದ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಶೀಘ್ರವೇ ಕೊರೊನಾದಿಂದ ಚೇತರಿಸಿಕೊಳ್ಳಿ" ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಇಮ್ರಾನ್ ಖಾನ್ ಅವರಿಗೆ ಇದಕ್ಕೂ ಮುನ್ನ ಪರೀಕ್ಷೆ ನಡೆಸಿದ್ದು, ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಪಾಕಿಸ್ತಾನ ಪ್ರಧಾನಿ ಕಾರ್ಯಾಲಯ ತಿಳಿಸಿತ್ತು. ಇಮ್ರಾನ್ ಖಾನ್ ಅವರ ಪತ್ನಿ ಬುಸ್ರಾ ಬಿಬಿ ಅವರಿಗೂ ಕೂಡಾ ಕೊರೊನಾ ಸೋಂಕು ದೃಢಪಟ್ಟಿದೆ.
ಇಮ್ರಾನ್ ಖಾನ್ ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ ಸಹ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್ಗೆ ಒಳಗಾಗಿದ್ದು, ವೈದ್ಯರು ಅವರ ಆರೋಗ್ಯದ ಕುರಿತು ತೀವ್ರ ನಿಗಾ ಇರಿಸಿದ್ದಾರೆ.