ಶಿವಮೊಗ್ಗ, ಮಾ.21 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕಾಯ್ದೆಯನ್ನು ಹಿಂಪಡೆಯಬೇಕು. ನಾವು ಮೊದಲಿನಿಂದಲೂ ಇದನ್ನೇ ಹೇಳುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರ ಕಿವಿಗೆ ಹಾಕಿಕೊಳ್ಳುತ್ತಿಲ್ಲ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಈ ಕುರಿತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಅವರು, "ಮಾರುಕಟ್ಟೆಯಲ್ಲಿ ರೈತರ ಬೆಳೆಗಳಿಗೆ ಉತ್ತಮ ಬೆಂಬಲ ಬೆಲೆಯ ಅಗತ್ಯವಿದ್ದು, ಇದಕ್ಕಾಗಿ ದೇಶದಲ್ಲಿ ಬಹಳ ದೊಡ್ಡ ಆಂದೋಲನ ನಡೆಯುತ್ತಿದೆ" ಎಂದರು.
ಇನ್ನು ಮೇ, ಜೂನ್ ವರೆಗೆ ಈ ಆಂದೋಲನ ಮುಗಿಯಲಿದೆ ಎಂದು ಕೇಂದ್ರ ಸರ್ಕಾರ ಭಾವಿಸಿದಂತಿದೆ. ಆದರೆ, ಈ ಆಂದೋಲನ ಈ ಕಾಯ್ದೆಗಳನ್ನು ವಾಪಸ್ ಪಡೆದು ರೈತರ ಹಿತ ಕಾಯುವವರೆಗೂ ಮುಗಿಯುವುದಿಲ್ಲ" ಎಂದು ಎಚ್ಚರಿಸಿದ್ದಾರೆ.