ಸಿಂಧನೂರು, ಮಾ.21 (DaijiworldNews/HR): "ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ, ಮುಂದಿನ ದಿನಗಳಲ್ಲಿ ಈ ಕ್ಷೇತ್ರದಿಂದ ವಿಜಯೇಂದ್ರರಿಗೆ ಟಿಕೆಟ್ ನೀಡುವ ಕುರಿತು ಪಕ್ಷ ನಿರ್ಧರಿಸಲಿದೆ" ಎಂದರು.
ಇನ್ನು "ಬೆಳಗಾವಿ ಲೋಕಸಭೆ ಹಾಗೂ ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ" ಎಂದು ಹೇಳಿದ್ದಾರೆ.