ಮೈಸೂರು, ಮಾ.21 (DaijiworldNews/PY): "ಮತಗಳೇನು ಸಿಎಂ ಯಡಿಯೂರಪ್ಪ ಅವರ ಜೇಬಿನಲ್ಲಿವೆಯೇ?. ಚುನಾವಣೆಯಲ್ಲಿ ಜನರ ಆಶೀರ್ವಾದವೇ ಅಂತಿಮ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.
ಉಪಚುನಾವಣೆಯ ಬಿಜೆಪಿ ಗೆಲುವು ಖಚಿತ ಎಂದ ಬಿಎಸ್ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, "ಚುನಾವಣೆಯಲ್ಲಿ ಜನರ ಆಶೀರ್ವಾದವೇ ಅಂತಿಮ ಜನರು ಉಪಚುನಾವಣೆಯಲ್ಲಿ ಸರಿಯಾದ ಉತ್ತರ ನೀಡಲಿದ್ದಾರೆ" ಎಂದಿದ್ದಾರೆ.
"ಬಿಜೆಪಿ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ರಾಜ್ಯದಲ್ಲಿ ಆಡಳಿತ ವಿರೋಧಿ ಸರ್ಕಾರದ ಅಲೆ ಇದೆ. ಇದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಆಗುತ್ತಿದೆ" ಎಂದು ಹೇಳಿದ್ದಾರೆ.
"ಪ್ರತಾಪ ಗೌಡ ಪಾಟೀಲ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾನೆ. ಈಗ ಆತನಿಗೆ ಇಮೇಜ್ ಇಲ್ಲ. ಇದು ಕಾಂಗ್ರೆಸ್ಗೆ ಉತ್ತಮ" ಎಂದಿದ್ದಾರೆ.
ಉಪಚುನಾವಣೆಯ ಸಿದ್ದತೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಕಾಂಗ್ರೆಸ್ ಉಪಚುನಾವಣೆಗೆ ಎಲ್ಲಾ ತಯಾರಿ ಮಾಡಿಕೊಂಡಿದೆ. ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಶಿಫಾರಸ್ಸು ಮಾಡಿದ್ದು, ಅವರ ಹೆಸರೇ ಅಂತಿಮವಾಗುವ ಭರವಸೆ ಇದೆ" ಎಂದು ಹೇಳಿದ್ದಾರೆ.