ಬೆಂಗಳೂರು, ಮಾ 21(DaijiworldNews/MS): " ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕ ಬಿಜೆಪಿಯ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲು ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ನಳಿನ್ ಕುಮಾರ್ ಕಟೀಲ್ ಅವರಿಗೆ ತಿರುಗೇಟು ನೀಡಿದ್ದಾರೆ.
ಮಸ್ಕಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಿದ್ದರಾಮಯ್ಯ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಪಕ್ಷ ಇದೀಗ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಈ ಕಾರಣದಿಂದ ಅವರು ತಿಂಗಳಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ. ಹಾಗಾಗಿ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿದ್ದಾರೆ" ಎಂದು ಲೇವಡಿ ಮಾಡಿದ್ದರು.
ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದ ಸಿದ್ದರಾಮಯ್ಯ "ಬೇಕಿದ್ದರೆ ನಳಿನ್ ಕುಮಾರ್ ಕಟೀಲು ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ" ಎಂದು ಎಚ್ಚರಿಸಿದರು.