ದಾವಣಗೆರೆ, ಮಾ 21(DaijiworldNews/MS):ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಗಳ ಬಗ್ಗೆ ಅಸಂಬದ್ದವಾಗಿ ಮಾತಾಡುವುದು ಸರಿಯಲ್ಲ. ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಬೇಕು. ಈ ಬಗ್ಗೆ ಮೊನ್ನೆ ತಾನೆ ಸುಮಾರು 25ಕ್ಕೂ ಹೆಚ್ಚು ಶಾಸಕರು ಚರ್ಚೆ ನಡೆಸಿದ್ದೇವೆ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಎಂದು ಶಾಸಕರು ಹೇಳಿದ್ದಾರೆ.
ಯತ್ನಾಳ್ ಸಿಎಂ ಆಗುವ ಹಗಲು ಗನಸು ಕಾಣುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ನೀನು ಕೂಡ ಭ್ರಷ್ಟ. ವಿಜಯಪುರದಲ್ಲಿ ತಮ್ಮ ಪುತ್ರನ ಮೂಲಕ ಭ್ರಷ್ಟಾಚಾರ ಮಾಡುತ್ತಿರುವಿರಿ. ನಿಮಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ವಿಜಯ ಸಾಧಿಸಿ ಬನ್ನಿ. ಆಗ ಮುಖ್ಯಮಂತ್ರಿಯಾಗುವ ಬಗ್ಗೆ ಮಾತಾಡು ಎಂದು ಯತ್ನಾಳ್ಗೆ ರೇಣುಕಾಚಾರ್ಯ ಸವಾಲ್ ಹಾಕಿದ್ದಾರೆ.
ಸಿಎಂ ಯಡಿಯೂರಪ್ಪ ವಿರುದ್ಧ ನೀಡುವ ಹೇಳಿಕೆಗಳನ್ನ ಸಹಿಸಲು ಸಾಧ್ಯವಿಲ್ಲ.ನಿಮಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ಎಂದು ಏಕವಚನದಲ್ಲೆ ವಾಗ್ದಾಳಿ ನಡೆಸಿರುವ ರೇಣುಕಾಚಾರ್ಯ ಯತ್ನಾಳ್ಗೆ ಸವಾಲ್ ಎಸೆದಿದ್ದಾರೆ.