ಸಾಂಬಾ, ಮಾ.21 (DaijiworldNews/HR): ಜಮ್ಮು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ನುಸುಳಲು ಪ್ರಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಬಂಧಿಸಿರುವ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಮುಂಜಾನೆ 2 ಗಂಟೆ ವೇಳೆಗೆ ಬಿಎಸ್ಎಫ್ ಯೋಧರು ಗಡಿರೇಖೆ ಮತ್ತು ಗಡಿ ಭದ್ರತಾ ಬೇಲಿಯ ನಡುವೆ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದಾಗ ಅಕ್ರಮವಾಗಿ ದೇಶದೊಳಗೆ ನುಸುಳುತ್ತಿದ್ದ ವ್ಯಕ್ತಿಯನ್ನು ಸೆರೆ ಹಿಡಿದಿದ್ದಾರೆ ಎನ್ನಲಾಗಿದೆ.
ಇನ್ನು ರಾಮ್ಗರ್ ಮಲ್ಲುಛಕ್ ಪೋಸ್ಟ್ ಬಳಿ ಪಾಕಿಸ್ತಾನದಿಂದ ಭಾರತದತ್ತ ನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಿಎಎಫ್ ಯೋಧರ ಗುಂಡಿಗೆ ಮಂಗಳವಾರ ಬಲಿಯಾಗಿದ್ದ ಎಂದು ಮೂಲಗಳು ತಿಳಿಸಿವೆ.