ವಿಜಯಪುರ, ಮಾ.21 (DaijiworldNews/HR): ಬಾಂಗ್ಲಾದೇಶಿ ನುಸುಳುಕೋರರಿಗೆ ನೆರವು ನೀಡುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶ, ಪಾಕಿಸ್ತಾನ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪಶ್ಚಿಮ ಬಂಗಾಳ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಒಕ್ಕೂಟದ ಗೆಲುವು ಖಚಿತವಾಗಿದ್ದು, ಮಮತಾ ಬ್ಯಾನರ್ಜಿ ಗೆದ್ದರೆ ಪಶ್ಚಿಮ ಬಂಗಾಳ ರಾಜ್ಯ ಮತ್ತೊಂದು ಕಾಶ್ಮೀರ ಆಗಲಿದೆ ಎಂಬ ಅರಿವು ಇರುವ ಅಲ್ಲಿನ ಜನರು ಟಿಎಂಸಿ, ಕಾಂಗ್ರೆಸ್, ಎಡ ಪಕ್ಷಗಳನ್ನು ಸೋಲಿಸಲಿದ್ದಾರೆ" ಎಂದರು.
ಇನ್ನು"ಬಾಂಗ್ಲಾದೇಶದಲ್ಲಿ ಹಿಂದೂಗಳ ಕಗ್ಗೊಲೆಯಗುತ್ತಿದ್ದು, ಮುಸ್ಲಿಂ ಮೂಲಭೂತವಾದಿಗಳ ಕೈಯಲ್ಲಿರುವ ಮಮತಾ್ ಹಾಗೂ ಪಶ್ಚಿಮ ಬಂಗಾಳ ರಾಜ್ಯವನ್ನು ಮುಕ್ತಗೊಳಿಸಲು ಅಲ್ಲಿನ ಜನರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೈತ್ರಿ ಬಲಪಡಿಸಲು ನಿರ್ಧರಿಸಿದ್ದಾರೆ" ಎಂದು ಹೇಳಿದ್ದಾರೆ.