ಶ್ರೀನಗರ, ಮಾ.22 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಯ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಮೃತಪಟ್ಟ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಉಗ್ರರು ಶೋಪಿಯಾನ್ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮುಖಾಮುಖಿಯಾಗಿ ಗುಂಡಿನ ಚಕಮಕಿ ನಡೆದು ಭದ್ರತಾಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಮೃತಪಟ್ಟ ಉಗ್ರರು ಲಷ್ಕರ್ ಎ ತೊಯ್ಬಾ ಸಂಘಟನೆಗೆ ಸೇರಿದವರಾಗಿದ್ದು, ಘಟನಾ ಸ್ಥಳದಲ್ಲಿ ಇಬ್ಬರು ಭಯೋತ್ಪಾದಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಅನೇಕ ಭಯೋತ್ಪಾದಕರು ಅಡಗಿರುವ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.