ಆನೇಕಲ್, ಮಾ.22 (DaijiworldNews/PY): ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ನಡೆದಿದೆ.
ತಮಿಳುನಾಡಿಗೆ ಸೇರಿದ ಕಾರು ಬೆಂಗಳೂರಿನತ್ತ ತೆರಳುತ್ತಿದ್ದು, ಈ ವೇಳೆ ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಸಮೀಪ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಕಾರಿನ ಮೇಲೆ ಮಗುಚಿ ಬಿದ್ದಿದೆ. ಲಾರಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಸ್ತೆ ನಡುವೆ ಕಾರಿನ ಮೇಲೆ ಜಲ್ಲಿಕಲ್ಲಿನ ರಾಶಿ ಬಿದ್ದ ಪರಿಣಾಮ, ಸಂಚಾರ ಅಸ್ತವ್ಯಸ್ತವಾಗಿದ್ದು, ಸಾಲುಗಟ್ಟಲೆ ವಾಹನಗಳೂ ನಿಮತಿದ್ದವು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಟ್ರಾಫಿಕ್ ಜಾಂಮ್ ನಿಯಂತ್ರಿಸಿದರು.
ಘಟನೆಯ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.