ಬೆಂಗಳೂರು, ಮಾ.22 (DaijiworldNews/HR): ಕರ್ನಾಟಕದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರಂತ ಭ್ರಷ್ಟ ವ್ಯಕ್ತಿಯನ್ನು ಮಾಡಿರುವ ಬಿಜೆಪಿ ನಾಯಕರಿಗೆ ಭ್ರಷ್ಟಾಚಾರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ ಪ್ರಶ್ನಿಸಿದ್ದಾರೆ.
ಈ ಕುರಿತು ಮಾಜಿ ಸಚಿವ ಕೃಷ್ಣ ಭೈರೇಗೌಡ , ಮಾಜಿ ಸಂಸದ ಉಗ್ರಪ್ಪ ಮತ್ತು ಬ್ರಿಜೇಶ್ ಕಾಳಪ್ಪ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು ವಿ.ಎಸ್. ಉಗ್ರಪ್ಪ ಮಾತನಾಡಿ, "ಬಿಜೆಪಿಯವರು ಲೋಕಪಾಲ ಕಾಯ್ದೆ ಜಾರಿಗೆ ಬರಬೇಕು ಅಂತ ಹೋರಾಟ ಮಾಡಿದ್ದವರು ಆದರೆ ಆ ಬಗ್ಗೆ ಬಿಜೆಪಿಯ ಯಾವ ನಾಯಕರು ಮಾತನಾಡುತ್ತಿಲ್ಲ. ಜೊತೆಗೆ ಕಪ್ಪು ಹಣ ಭಾರತಕ್ಕೆ ಮತ್ತೆ ಬರುತ್ತೆ ಎಮ್ದು ಕೂಡ ಹೇಳಿದ್ದರು. ಆ ಕೆಲಸ ಕೂಡ ಇವರಗೆ ಆಗಲೇ ಇಲ್ಲ" ಎಂದರು.
ಇನ್ನು" ಬಿಜೆಪಿ ಅಧಿಕಾರದಲ್ಲಿ ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಲೋಕಪಾಲ ಈವರೆಗೆ ಜಾರಿಯಾಗಿಲ್ಲ. ಇನ್ನೂ ಕಪ್ಪು ಹಣದ ಬಗ್ಗೆ ಮಾತೇ ಇಲ್ಲದಂತಾಗಿದೆ" ಎಂದಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ದ ದೇವನಹಳ್ಳಿ ತಾಲ್ಲೂಕು ಕೆಐಡಿಬಿ ಲ್ಯಾಂಡ್ ವಿಚಾರಕ್ಕೆ ಹೈ ಕೋಟ್೯ ಆದೇಶ ಒಂದನ್ನು ಕೊಟ್ಟಿದೆ. ಇಂತಹ ಭ್ರಷ್ಟ ವ್ಯಕ್ತಿಯನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದ ಬಿಜೆಪಿಗೆ ಭ್ರಷ್ಟಾಚಾರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ" ಎಂದು ಹೇಳಿದ್ದಾರೆ.