ಜೋನಾಯ್, ಮಾ.22 (DaijiworldNews/HR): ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೆ ಕಾಂಗ್ರೆಸ್ ಪಕ್ಷ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಎಐಯುಡಿಎಫ್ ಜತೆ ಮೈತ್ರಿ ಮಾಡಿಕೊಂಡಿದ್ದು, ಅದು ಅಧಿಕಾರಕ್ಕೆ ಬಂದಲ್ಲಿ ಅಸ್ಸಾಂನಲ್ಲಿ ಅಕ್ರಮ ಒಳನುಸುಳುವಿಕೆ ಹೆಚ್ಚಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಚುನಾವಣಾ ಪ್ರಚಾರ ಸಮಾರಂಭದಲ್ಲಿ ಮಾತನಾಡಿದ ಅವರು, "ನಾವು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಿರು ರಾಜ್ಯದಲ್ಲಿ ಕಾಂಗ್ರೆಸ್ ಬದ್ರುದ್ದೀನ್ ಅಜ್ಮಲ್ ಜತೆ ಮೈತ್ರಿಮಾಡಿಕೊಂಡಿದ್ದು, ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ನುಸುಳುಕೋರರ ಸಂಖ್ಯೆ ಹೆಚ್ಚಾಗಲಿದ್ದು, ನಿಮಗೆ ಅಕ್ರಮವಾಗಿ ನುಸುಳುವವರನ್ನು ತಡೆಯಬೇಕೆ? ಕಾಂಗ್ರೆಸ್ ಪಕ್ಷ ಅಜ್ಮಲ್ ಜತೆ ಕೈಜೋಡಿಸಿರುವುದಕ್ಕೆ ನಾಚಿಕೆಪಡಬೇಕು" ಎಂದರು.
ಇನ್ನು "ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅಸ್ಸಾಂನಲ್ಲಿ ಪ್ರತಿಭಟನೆ, ಹಿಂಸಾಚಾರ, ಬಾಂಬ್ ಸ್ಫೋಟ, ಸಾವು ಮತ್ತು ಕರ್ಫ್ಯೂ ಸಾಮಾನ್ಯವಾಗಿತ್ತು. ರಾಹುಲ್ ಗಾಂಧಿ ಹೇಳುತ್ತಾರೆ, ಅಸ್ಸಾಂ ಜನರ ಅಸ್ಮಿತೆ ಮತ್ತು ಅನನ್ಯತೆಯನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತಾರೆ. ಆದರೆ ನಾನು ಇಂದು ಬಹಿರಂಗವಾಗಿ ಕೇಳುತ್ತೇನೆ, ಅಸ್ಸಾಂನಲ್ಲಿ ಕಾಂಗ್ರೆಸ್ ಇದನ್ನು ಬದ್ರುದ್ದೀನ್ ಅಜ್ಮಲ್ ತೊಡೆ ಮೇಲೆ ಕುಳಿತು ಸಾಧಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.