ಗ್ವಾಲಿಯರ್, ಮಾ.23 (DaijiworldNews/PY): ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದಂತೆ 13 ಮಂದಿ ಸಾವನ್ನಪ್ಪಿದ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
"ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ನಡೆದಿದ್ದು, ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದರು" ಎಂದು ಗ್ವಾಲಿಯರ್ ಎಸ್ಪಿ ಅಮಿತ್ ಸಂಘಿ ಹೇಳಿದ್ದಾರೆ.
ಪ್ರಯಾಣಿಕರ ಪೈಕಿ ಎಂಟು ಮಂದಿ ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನುಳಿದವರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಸಾವನ್ನಪ್ಪಿದ್ದಾರೆ.