ಮುಂಬೈ, ಮಾ.23 (DaijiworldNews/PY): ಮನ್ಸುಖ್ ಹಿರೇನ್ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದಮನ್ನಲ್ಲಿ ದುಬಾರಿ ಬೆಲೆಯ ಕಾರೊಂದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ ವಶಪಡಿಸಿಕೊಂಡಿದೆ.
"ಈ ಕಾರು ಮಹಾರಾಷ್ಟ್ರದ ನೋದಣಿ ಸಂಖ್ಯೆಯಲ್ಲಿದ್ದು, ಈ ಕಾರು ಯಾರ ಒಡೆತನದಲ್ಲಿದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ" ಎಂದು ಅಧಿಕಾರಿಗಳು ಹೇಳಿದ್ದಾರೆ.
"ಮನ್ಸುಖ್ ಹಿರೇನ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಟಿಎಸ್ ತಂಡ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಬಳಿ ಗುಜರಾತ್ ಮೂಲದ ವ್ಯಕ್ತಿಯನ್ನು ಕೂಡಾ ವಶಪಡಿಸಿಕೊಂಡಿದೆ. ಬಂಧಿತರಿಗೆ ಈ ವ್ಯಕ್ತಿ ಸಿಮ್ ಕಾರ್ಡ್ ನೀಡಿದ್ದಾನೆ ಎಂದು ತಿಳಿದು ಬಂದಿದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಂಧಿತ ವ್ಯಕ್ತಿಯಿಂದ ಅನೇಕ ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.