ಬೆಂಗಳೂರು, ಮಾ.23 (DaijiworldNews/PY): ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕೊರೊನಾ ಲಸಿಕೆ ಪಡೆದುಕೊಂಡರು.
ಮಂಗಳವಾರ ಜಯದೇವ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ಇತ್ತೀಚೆ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಬಿ.ಸಿ.ಪಾಟೀಲ್, ಸಚಿವ ಸುಧಾಕರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅನೇಕ ಸಚಿವರು, ಶಾಸಕರು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದು, ಸಾರ್ವಜನಿಕರು ಕೊರೊನಾ ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದರು.