ನವದೆಹಲಿ, ಮಾ.23 (DaijiworldNews/PY): ತನ್ನ 14 ವರ್ಷದ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆ ಹಾಗೂ ಸಂಬಂಧಪಟ್ಟ ಇತರೆ ಕಾಯ್ದೆಯಡಿ ಮನೆಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಗಳು ತಾಯಿಯ ಬಳಿ ಹೇಳಿಕೊಂಡಿದ್ದು, ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಸಾಬೀತಾಗಿದೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, "ಆಕೆ ಮನೆ ಕೆಲಸಕ್ಕೆ ಹೋಗುತ್ತಿದ್ದು, ಆಕೆಯ ಪತಿ ಆಟೋ ಚಾಲಕನಾಗಿದ್ದಾನೆ. ಸಂತ್ರಸ್ತೆಯ ತಾಯಿ ಮನೆಯಲ್ಲಿ ಇಲ್ಲದೇ ಇರುವ ಸಂದರ್ಭ ತಂದೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಗಳು ನನ್ನ ಬಳಿ ಹೇಳಿಕೊಂಡಿದ್ದಳು. ಈ ಬಗ್ಗೆ ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದರು" ಎಂದು ಹೇಳಿದ್ದಾರೆ.
"ಪ್ರಕರಣದ ತನಿಖೆ ಪ್ರಗತಿಯಲ್ಲಿದೆ" ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮುನೇಶ್ ತಿಳಿಸಿದ್ದಾರೆ