ನವದೆಹಲಿ, ಮಾ.24 (DaijiworldNews/MB) : ಅಂತಾರಾಷ್ಟ್ರೀಯ ವಿಮಾನಯಾನಗಳ ರದ್ಧತಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಪ್ರಾಧಿಕಾರವು ಅನುಮತಿಸಬಹುದಾಗಿದೆ.
ಈ ನಿಷೇಧವು ಒಪ್ಪಿಗೆ ಪಡೆದು ಕಾರ್ಯಾಚರಿಸುತ್ತಿರುವ ವಿಮಾನಗಳಿಗೆ ಹಾಗೂ ಸರಕು ಸಾಗಾಣೆ ವಿಮಾನಗಳಿಗತೆ ಅನ್ವಯವಾಗಲ್ಲ ಎಂದು ಕೂಡಾ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಮಧ್ಯೆ, ಗೃಹ ಸಚಿವಾಲಯವು ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿ ಏಪ್ರಿಲ್ 1 ರಿಂದ 30 ರವರೆಗೆ ಜಾರಿಯಲ್ಲಿ ಇರಲಿದೆ.
ಕೊರೊನಾ ಸೋಂಕಿಗೆ ಲಸಿಕೆ ನೀಡಲಾಗುತ್ತಿರುವ ಮಧ್ಯೆಯೂ ಕೊರೊನಾ ಸೋಂಕು ನಿರಂತರವಾಗಿ ಏರಿಕೆ ಆಗುತ್ತಿರುವುದನ್ನು ಗಮನದಲ್ಲಿರಿಸಿಕೊಂಡು ಅಂತರರಾಷ್ಟ್ರೀಯ ವಿಮಾನಯಾನ ರದ್ಧತಿ ವಿಸ್ತರಣೆ ಮಾಡಲಾಗಿದೆ ಎಂದೂ ನಿರ್ದೇಶನಾಲಯ ತಿಳಿಸಿದೆ.