ಬೆಂಗಳೂರು, ಮಾ. 24 (DaijiworldNews/HR): ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು, ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ" ಎಂದರು.
ಇನ್ನು ಕರ್ನಾಟಕ ರಾಜಕೀಯದಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆ ಈಗಾಗಲೇ ಬೆಂಕಿ ಹೊತ್ತಿಸಿದ್ದು, ಇದರ ಬೆನ್ನಲ್ಲೇ ಸಚಿವರು ಮತ್ತೊಂದು ಟ್ವೀಟ್ ಮಾಡಿದ್ದು, ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ ಎನ್ನಲಾಗಿದೆ.